ಶಿವಮೊಗ್ಗ: ಬಿಎಸ್‍ಎನ್‍ಎಲ್ ನ್ನು ಖಾಸಗೀಕರಣಗೊಳಿಸಿ, ಬಿಎಸ್‍ಎನ್‍ಎಲ್‍ನ ಎಲ್ಲ ನೌಕರರನ್ನು ವಜಾಗೊಳಿಸಲಾಗುವುದು ಎಂಬ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ, ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿದರು. ಬಿಎಸ್‍ಎನ್‍ಎಲ್ ಖಾಸಗೀಕರಣ ಮಾಡುವುದು ಹಾಗೂ ನೌಕರರನ್ನು ಕೆಲಸದಿಂದ ವಜಾ ಮಾಡುವ ಕುರಿತು ಹೇಳಿಕೆ ನೀಡಿದ್ದಾರೆ. ಅಲ್ಲದೆ ನೌಕರರನ್ನು ದೇಶದ್ರೋಹಿಗಳೆಂದು ಕರೆದಿದ್ದಾರೆ. ಹೀಗಾಗಿ ಅನಂತ ಕುಮಾರ್ ಹೆಗಡೆ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು. ಅಲ್ಲದೆ ಸಂಸದರು ನೌಕರರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ
