Breaking News

ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

Spread the love

ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. ಅವರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಸಿಎಂ ಪರಿಹಾರ ನೀಡುತ್ತಾರೆಂಬ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಒಂದು ವೇಳೆ ಸರ್ಕಾರ ಪರಿಹಾರ ನೀಡದೇ ಇದ್ದರೆ ನನ್ನ ಜೇಬಿನಿಂದ ನನ್ನ ಕ್ಷೇತ್ರದ ಸಂತ್ರಸ್ತರಿಗೆ ಪರಿಹಾರ ನೀಡುತ್ತೇನೆ. ಪರಿಹಾರ ಸಿಗದ ಕಾರಣ ಕ್ಷೇತ್ರದ ಜನ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಯಾರಿಗೂ ಪ್ರತಿಭಟನೆ ಮಾಡದಂತೆ ನಾನು ವಿನಂತಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ