Breaking News

E-KYC : ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿದೆ. ಆದ್ದರಿಂದ ಜಿಲ್ಲೆಯ ಇನ್ನುಳಿದ ಪಡಿತರ ಚೀಟಿದಾರರು 2021ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

ಕಲಬುರಗಿ ಜಿಲ್ಲೆಯ 983 ನ್ಯಾಯಬೆಲೆ ಅಂಗಡಿಗಳಲ್ಲಿನ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದೆ. ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪ್ರತಿಶತ 65 ರಷ್ಟು ಆದ್ಯತಾ (ಬಿ.ಪಿ.ಎಲ್.) ಪಡಿತರ ಚೀಟಿದಾರರ ಇ-ಕೆವೈಸಿ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ