Breaking News

ಸೈಟ್, ಮನೆ, ಜಮೀನು, ಫ್ಲ್ಯಾಟ್ ಖರೀದಿಸುವವರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ಕಡಿತ ಸಾಧ್ಯತೆ

Spread the love

ಬೆಂಗಳೂರು: ನಿವೇಶನ, ಜಮೀನು, ಫ್ಲಾಟ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಭೂಮಿ ಮಾರ್ಗಸೂಚಿ ದರ ಕಡಿತಗೊಳಿಸಲು ಮುಂದಾಗಿದೆ.

ಕೃಷಿ ಜಮೀನು, ಕೃಷಿಯೇತರ ಜಮೀನು, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಮಾರಾಟ ಮತ್ತು ಖರೀದಿಸುವಾಗ ಮಾರ್ಗಸೂಚಿ ದರ ಹೆಚ್ಚಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಕಡಿತಗೊಳಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಕೊರೋನಾದಿಂದಾಗಿ ನೆಲಕಚ್ಚಿರುವ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಚೇತರಿಕೆ ನೀಡಲು ಮಾರ್ಗಸೂಚಿ ದರ ಕಡಿತಗೊಳಿಸಲಾಗುತ್ತದೆ. ಈ ಮೂಲಕ ಆದಾಯ ಉದ್ದೇಶ ಹೊಂದಲಾಗಿದೆ ಎಂದು ಹೇಳಲಾಗಿದೆ.

ಮಾರ್ಗಸೂಚಿ ದರವನ್ನು ಪ್ರಸ್ತುತ ಇರುವ ದರಕ್ಕಿಂತ ಶೇಕಡ 15 ರಿಂದ 20 ರಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಮಾನ್ಯವಾಗಿ ಪ್ರತಿವರ್ಷ ಮಾರ್ಗಸೂಚಿ ದರ ಹೆಚ್ಚಳ ಮಾಡಲಾಗುತ್ತದೆ. ಆದರೆ, ಈ ಬಾರಿ ಜಮೀನು, ಮನೆ, ನಿವೇಶಣ ಖರೀದಿಸುವವರಿಗೆ ಅನುಕೂಲವಾಗುವಂತೆ ಮಾರ್ಗಸೂಚಿ ದರ ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ