ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತಂತೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ.5 ರಂದು ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು.
‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಗಡಿಯಿಂದ ರಾಜ್ಯಕ್ಕೆ ಬರುವವರು ನಕಲಿ ಕೋವಿಡ್ ನೆಗೆಟಿವ್ ವರದಿ ಪಡೆದು ಬರುತ್ತಿರುವುದು ಪತ್ತೆಯಾಗಿದೆ. ಹೀಗಾಗಿ ಎಲ್ಲರನ್ನೂ ಪರೀಕ್ಷಿಸಿ ರಾಜ್ಯದೊಳಗೆ ಬಿಡಲಾಗುತ್ತಿದೆ. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.