Breaking News

ಬೆಲೆ ಏರಿಕೆ ಕುರಿತು ಹಣಕಾಸು ಸಚಿವರ ಜೊತೆ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the love

ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತಂತೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ.5 ರಂದು ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು.

‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಗಡಿಯಿಂದ ರಾಜ್ಯಕ್ಕೆ ಬರುವವರು ನಕಲಿ ಕೋವಿಡ್ ನೆಗೆಟಿವ್ ವರದಿ ಪಡೆದು ಬರುತ್ತಿರುವುದು ಪತ್ತೆಯಾಗಿದೆ. ಹೀಗಾಗಿ ಎಲ್ಲರನ್ನೂ ಪರೀಕ್ಷಿಸಿ ರಾಜ್ಯದೊಳಗೆ ಬಿಡಲಾಗುತ್ತಿದೆ. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ