Breaking News

SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ

Spread the love

2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20 ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ತಿಳಿಸಿದ್ದಾರೆ.

ಪ್ರವೇಶಾವಧಿಯನ್ನು ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರು ಕೋರಿಕೆ ಸಲ್ಲಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ