Breaking News

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

Spread the love

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 6 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು.

ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4,28,364 ಮತದಾರರು ಮತ ಚಲಾವಣೆ ಮಾಡಲಿದ್ದು, 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 ಸೂಕ್ಷ್ಮ, 42 ಅತಿ ಸೂಕ್ಷ್ಮ ಮತಗಟ್ಟೆಗಳು ಇವೆ.

ಹುಬ್ಬಳ್ಳಿ -ಧಾರವಾಡ ಮಹಾನಗರಪಾಲಿಕೆಯ 82 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ 82, ಕಾಂಗ್ರೆಸ್ 82 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜೆಡಿಎಸ್ 49, ಆದ್ಮಿ ಪಕ್ಷ 41, ಇತರರು 166 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 842 ಮತಗಟ್ಟೆ ಸ್ಥಾಪಿಸಲಾಗಿದೆ.

ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, 300 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 5,19,464 ಮತದಾರರು ಮತ ಚಲಾವಣೆ ಮಾಡಲಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ