ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು.
ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು. ಜೋಶಿ ಪುತ್ರಿಯ ಮದುವೆಗೆ ಕೋವಿಡ್ ರೂಲ್ಸ್ ಬ್ರೇಕ್ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಬಸವರಾಜ ಹೊರಟ್ಟಿ, ಡಿಸಿ ಸಹ ರಾಜಕಾರಣಿಗಳ ಕೈಯಲ್ಲಿ ಕೆಲಸ ಮಾಡುವವರು. ದಕ್ಷತೆಯಿಂದ ಕೆಲಸ ಮಾಡಬೇಕು. ಸದನದಲ್ಲಿ ಈ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ ನಾನು ಸಹ ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.
Laxmi News 24×7