Breaking News

ರಸ್ತೆ ಅಪಘಾತ ಸ್ಥಳದಲ್ಲೇ “ವಿದ್ಯಾಗಿರಿ ಠಾಣೆಯ ಕಾನ್ಸ್ಟೇಬಲ್” ಸಾವು.

Spread the love

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಊಟ ಕೊಡಲು ಹೊರಟಿದ್ದ ಪೊಲೀಸ್ ಪೇದೆಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗಪ್ಪ ಬುಸಣ್ಣವರ ಎಂಬ ಪೊಲೀಸ್ ಪೇದೆಯೇ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಊಟ ಕೊಡಲು ಹೋದಾಗ ನವಲೂರು ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೈಕ್ ಹಾಗೂ ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಲಾರಿ ಪೊಲೀಸ್ ಪೇದೆಯ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ,ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ