Breaking News
Home / ರಾಜಕೀಯ / ಜನವರಿ 21 ನ್ನು ”ದಾಸೋಹ ದಿನ” ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ

ಜನವರಿ 21 ನ್ನು ”ದಾಸೋಹ ದಿನ” ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ

Spread the love

ಬೆಂಗಳೂರು: ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ”ದಾಸೋಹ ದಿನ” ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ.

ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ.

ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ರೂಪುರೇಷೆ ತಯಾರಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಧನ್ಯವಾದ ಸಲ್ಲಿಸಿದ್ದಾರೆ.

 

https://twitter.com/BCNagesh_bjp/status/1433809418810916870/photo/1?ref_src=twsrc%5Etfw%7Ctwcamp%5Etweetembed%7Ctwterm%5E1433809418810916870%7Ctwgr%5E%7Ctwcon%5Es1_&ref_url=https%3A%2F%2Fwww.kannadaprabha.com%2Fkarnataka%2F2021%2Fsep%2F03%2Fthe-state-government-has-decided-to-celebrate-january-21-as-dasoha-day-453525.html


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ