ಬೆಂಗಳೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ಮಾಡಿದ್ದಾರೆ. ಶಿಕ್ಷಣ ಸಚಿವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಭೇಟಿ ಮಾಡಿದ ಬಿಸಿ ನಾಗೇಶ್, ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಕೆಲವು ಹೊತ್ತುಗಳ ಕಾಲ ಇತ್ತೀಚೆಗಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿ.ಸಿ.ನಾಗೇಶ್, ಇದೊಂದು ಸೌಜನ್ಯದ ಭೇಟಿ ಅಂತಾ ತಿಳಿಸಿದ್ದಾರೆ.
Laxmi News 24×7