Breaking News

ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

Spread the love

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ.

ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್​ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪೋಲಿಸ್ ಅಧಿಕಾರಿಗಳ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the loveಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ