Breaking News

ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ

Spread the love

ಲಕ್ನೋ: ನರ್ಸಿಂಗ್ ವಿದ್ಯಾರ್ಥಿನ ಮೆಡಿಕಲ್ ಕಾಲೇಜಿನ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಕೋವಿಡ್-19 ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು. ಆದ್ರೆ ನರ್ಸಿಂಗ್ ವಿದ್ಯಾರ್ಥಿನಿಗೆ ಡ್ಯೂಟಿಗೆ ತೆರಳಲು ಸಿದ್ಧವಿರಲಿಲ್ಲ. ಅಧಿಕಾರಿಗಳ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ವಿದ್ಯಾರ್ಥಿನಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೋವಿಡ್-19 ಆಸ್ಪತ್ರೆಯಲ್ಲಿ ಯಾವುದೇ ಸುರಕ್ಷತೆ ಇಲ್ಲ. ಹಾಗಾಗಿ ಅಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿ ಹಿರಿಯ ಅಧಿಕಾರಿಗಳ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಇದೇ ವಿಡಿಯೋದಲ್ಲಿ ವಿದ್ಯಾರ್ಥಿನಿ ಸಂಬಳ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಇರಿಸಿದ್ದಾಳೆ. ನಮ್ಮ ಮೇಲೆ ಮಾನಸಿಕವಾಗಿ ಒತ್ತಡ ಹಾಕಲಾಗುತ್ತಿದೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ