ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.
ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ksrtc.org/counselling ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕೌನ್ಸೆಲಿಂಗ್ ಗಾಗಿ ನೌಕರರು ಸೆಪ್ಟೆಂಬರ್ 13 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿದ್ದರೆ ಲಭ್ಯವಿರುವ ಖಾಲಿ ಹುದ್ದೆಗಳಿಗೆ ನೌಕರರನ್ನು ನಿಯೋಜನೆ ಮಾಡಲಾಗುತ್ತದೆ. ಯಾವುದೇ ಲಿಖಿತ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ ಎಂದು ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.
Laxmi News 24×7