Breaking News

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.

ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ksrtc.org/counselling ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೌನ್ಸೆಲಿಂಗ್ ಗಾಗಿ ನೌಕರರು ಸೆಪ್ಟೆಂಬರ್ 13 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿದ್ದರೆ ಲಭ್ಯವಿರುವ ಖಾಲಿ ಹುದ್ದೆಗಳಿಗೆ ನೌಕರರನ್ನು ನಿಯೋಜನೆ ಮಾಡಲಾಗುತ್ತದೆ. ಯಾವುದೇ ಲಿಖಿತ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ ಎಂದು ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ