Breaking News

ಮದ್ಯ ಕುಡಿಸಿ ಮಹಿಳಾ ಟೆಕ್ಕಿ ಮೇಲೆ ನೈಜೀರಿಯಾ ಪ್ರಜೆಗಳಿಂದ ಅತ್ಯಾಚಾರ – ಇಬ್ಬರ ಬಂಧನ

Spread the love

ಬೆಂಗಳೂರು, ಸೆ 04 : ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾ ಪ್ರಜೆಗಳಿಬ್ಬರು ಬಂಧಿಸಲಾಗಿದೆ.

ಮಹಿಳಾ ಟೆಕ್ಕಿ ಈ ಬಗ್ಗೆ ಬಾಣಸವಾಡಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ನೈಜೀರಿಯಾ ಪ್ರಜೆಗಳಾದ ಬಾಣಸವಾಡಿ ನಿವಾಸಿ ಟೋನಿ (35) ಹಾಗೂ ಉಬಾಕಾ (36) ಇವರಿಬ್ಬರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಯುವತಿ ಮೂಲತಃ ಕಲ್ಬುರ್ಗಿ ಜಿಲ್ಲೆಯವಳಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದು ಯುವತಿಗೆ ಹಲವು ವರ್ಷಗಳಿಂದ ನೈಜೀರಿಯಾ ಪ್ರಜೆ ಟೋನಿಯ ಪರಿಚಯವಿರುತ್ತದೆ. ಈತನ ಮತ್ತೋರ್ವ ಸ್ನೇಹಿತ ಉಬಾಕಾ ಹಲವು ಬಾರಿ ಯುವತಿಯನ್ನು ಪರಿಚಯ ಮಾಡಿಕೊಳ್ಳಲು ಯತ್ನಿಸಿದ್ದ. ಆದರೆ ಯುವತಿಗೆ ಇಷ್ಟವಿರದ ಕಾರಣ ಇಬ್ಬರ ನಡುವೆ ವೈಷಮ್ಯ ಉಂಟಾಗಿತ್ತು.

ಉಬಾಕಾ ಹಲವು ಬಾರಿ ಯುವತಿಯನ್ನು ಪರಿಚಯ ಮಾಡಿಕೊಳ್ಳಲು ಯತ್ನಿಸಿದ್ದ. ಆದರೆ ಇಬ್ಬರ ನಡುವೆ ವೈಷಮ್ಯ ಉಂಟಾಗಿತ್ತು. ಈ ವೇಳೆ ಉಬಾಕಾನನ್ನು ನೋಡಿದ ಸಂತ್ರಸ್ತೆ ಟೋನಿ ಮೇಲೆ ಸಿಟ್ಟಾಗಿದ್ದರು. ಬಳಿಕ ಟೋನಿ, ಯುವತಿಯನ್ನು ಸಮಾಧಾನಪಡಿಸಿದ್ದ. ನಂತರ ಮೂವರು ಒಟ್ಟಿಗೆ ಕುಳಿತು ಮದ್ಯ ಸೇವಿಸಿದ್ದಾರೆ. ಮದ್ಯ ಸೇವಿಸಿದ ಬಳಿಕ ತನಗೆ ನಶೆ ಬಂದಿದ್ದು, ಈ ವೇಳೆ ತನ್ನ ಮೇಲೆ ಅತ್ಯಾಚಾರ ನಡೆದಿದೆ. ತನಗೆ ಪ್ರಜ್ಞೆ ಬಂದ ಬಳಿಕ ನೋಡಿದಾಗ ತನ್ನ ಜತೆ ಉಬಾಕ ಬೆತ್ತಲೆಯಾಗಿದ್ದ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ. ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ, ಜೈಲಿಗಟ್ಟಲಾಗಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದರು.

ಯುವತಿಗೆ ಹಲವು ಮಂದಿ ಆಫ್ರಿಕನ್ ಪ್ರಜೆಗಳು ಸ್ನೇಹವಿದ್ದು, ಆಕೆಯ ಮೊಬೈಲ್‌ನಲ್ಲಿ ಹಲವು ನಂಬರ್‌ಗಳು ಪತ್ತೆಯಾಗಿವೆ. ಹೀಗಾಗಿ ಆಫ್ರಿಕನ್ ಪ್ರಜೆಗಳೊಂದಿಗೆ ಮಾದಕ ದಂಧೆ ನಂಟು ಹೊಂದಿದ್ದಾಳೆಯೇ ಅಥವಾ ಇನ್ನಿತರ ವ್ಯವಹಾರ ಹೊಂದಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ