Breaking News

ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ; ಕಾರ್ಯಕರ್ತರ ಜೊತೆ ಸಭೆ, ಪ್ರತಿಭಟನೆ ನಡೆಸುತ್ತೇವೆ: ಡಿ ಕೆ ಶಿವಕುಮಾರ್

Spread the love

ಕಾಂಗ್ರೆಸ್​ಗೆ ಪದಾಧಿಕಾರಿಗಳ ನೇಮಕದ ಬಗ್ಗೆ ಸೂಚಿಸಿದ್ದೇನೆ. ಮಾಸಾಂತ್ಯದಲ್ಲಿ ಎಲ್ಲಾ ಘಟಕಗಳಿಗೆ ನೇಮಕಾತಿ ಮಾಡುತ್ತೇವೆ. ಕಾಂಗ್ರೆಸ್​ನಿಂದ ಸಾಂಸ್ಕೃತಿಕ, ಸಾರಿಗೆ ವಿಭಾಗ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ.

ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧತೆ ನಡೆಸುತ್ತಿದ್ದೇವೆ. ಜಿಲ್ಲಾ ಕಾಂಗ್ರೆಸ್​ ನಾಯಕರ ಅಭಿಪ್ರಾಯವನ್ನು ಕೇಳಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಶನಿವಾರ (ಸಪ್ಟೆಂಬರ್ 4)​ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್​ ಪೂರ್ತಿ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ನಡೆಸುತ್ತೇವೆ. 2 ದಿನಗಳಿಗೊಮ್ಮೆ ನಾಯಕರು ತೆರಳಿ ಸಭೆ, ಧರಣಿ ನಡೆಸ್ತೇವೆ. ಕಾಂಗ್ರೆಸ್ ಕಾರ್ಯಕರ್ತರ ಜತೆ ಸಭೆ, ಪ್ರತಿಭಟನೆ ಮಾಡ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ಗೆ ಪದಾಧಿಕಾರಿಗಳ ನೇಮಕದ ಬಗ್ಗೆ ಸೂಚಿಸಿದ್ದೇನೆ. ಮಾಸಾಂತ್ಯದಲ್ಲಿ ಎಲ್ಲಾ ಘಟಕಗಳಿಗೆ ನೇಮಕಾತಿ ಮಾಡುತ್ತೇವೆ. ಕಾಂಗ್ರೆಸ್​ನಿಂದ ಸಾಂಸ್ಕೃತಿಕ, ಸಾರಿಗೆ ವಿಭಾಗ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿ, ಎಂಎಲ್​ಸಿ ಚುನಾವಣೆಗೆ ತಯಾರಿ ಮಾಡುತ್ತಿದ್ದೇವೆ. ಜಿಲ್ಲಾ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಪ್ರತಿ ದಿನ ಎರಡು ಗ್ರಾಮಕ್ಕೆ ನಾಯಕರು ತೆರಳಿ ಕಾರ್ಯಕರ್ತರ ಸಭೆ ಅಥವಾ ಪ್ರತಿಭಟನೆ ಮಾಡುತ್ತೇವೆ. ಎಲ್ಲಾ ಮುಂಚೂಣಿ ಘಟಕಗಳ ನೇಮಕಾತಿ ತಿಂಗಳಾಂತ್ಯದಲ್ಲಿ ಮಾಡುತ್ತೇವೆ ಎಂದು ಶಿವಕುಮಾರ್ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ