Breaking News
Home / ಜಿಲ್ಲೆ / ಕೋಲಾರ / ಕೊರೊನಾ ಹಿನ್ನೆಲೆ ಕೋಲಾರದಲ್ಲಿ ಗಲ್ಲಿ ಗಣೇಶ ನಿಷೇಧ:

ಕೊರೊನಾ ಹಿನ್ನೆಲೆ ಕೋಲಾರದಲ್ಲಿ ಗಲ್ಲಿ ಗಣೇಶ ನಿಷೇಧ:

Spread the love

ಕೋಲಾರ: ಕೊರೊನಾ ಹಿನ್ನೆಲೆ ಈ ಬಾರಿ ಸಾರ್ವಜನಿಕವಾಗಿ ಬೀದಿಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲು ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಹಿನ್ನೆಲೆ ಗಣೇಶ ಹಬ್ಬವನ್ನು ಆಡಂಬರದಿಂದ ಆಚರಣೆ ಮಾಡದೆ, ಸರಳವಾಗಿ ಮತ್ತು ಭಕ್ತಿ-ಭಾವದಿಂದ ಆಚರಣೆ ಮಾಡುವಂತೆ ಜನರಲ್ಲಿ ಮನವಿ ಮಾಡಿದರು.

ಈ ಹಿಂದೆ ಗಣೇಶ ಮೂರ್ತಿಗಳನ್ನು ಗಲ್ಲಿಗಳಲ್ಲಿ ಪ್ರತಿಷ್ಟಾಪನೆ ಮಾಡುವ ಜೊತೆಗೆ ಸಾರ್ವಜನಿಕವಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಎಲ್ಲೆಡೆ ಜನರನ್ನು ಬೆಂಬಿಡದೆ ಕಾಡುತ್ತಿರುವುದರಿಂದ ಗಣೇಶ ಮೂರ್ತಿಗಳನ್ನು ಸಾರ್ವಜನಿಕವಾಗಿ ಪ್ರತಿಷ್ಟಾಪನೆ ಮಾಡಲು ಮತ್ತು ವಿಸರ್ಜನೆ ಮಾಡಲು ಅವಕಾಶವಿಲ್ಲ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮನೆಗಳಲ್ಲಿ ಮಾಡಿಕೊಂಡು ಪೂಜೆ ಮಾಡಿ, ಬಳಿಕ ವಿಸರ್ಜನೆ ಮಾಡುವಂತೆ ಸೂಚಿಸಿದರು.

ಮಾರುಕಟ್ಟೆಗಳಲ್ಲಿ ಪಿಒಪಿ ಗಣಪತಿಗಳ ಮಾರಾಟಕ್ಕೂ ಅವಕಾಶವಿಲ್ಲ, ಒಂದು ವೇಳೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಮನೆಗಳಲ್ಲಿ ಅರಿಶಿನ ಪುಡಿ ಮತ್ತು ಗೋದಿ ಹಿಟ್ಟಿನಿಂದ ಗಣೇಶನ ವಿಗ್ರಹಗಳನ್ನು ತಯಾರಿಸಿ ರೋಗಮುಕ್ತರಾಗುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕಾರ್ತಿಕ ರೆಡ್ಡಿ ಸೇರಿದಂತೆ ಪರಿಸರ ನಿಯಂತ್ರಣ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

Spread the loveಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ