Breaking News

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢ

Spread the love

ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢಪಟ್ಟಿದೆ.ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ತಾಯಿ ಹಾಗೂ ತಮ್ಮನಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿಗೆ 85 ವರ್ಷ ವಯಸ್ಸಾಗಿದ್ದು, ಅವರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರು ಇನ್ನೂ ಸರ್ಕಾರ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಡೆಯುತ್ತಿದ್ದು, ಇದರ ಮಧ್ಯೆ ಇವರಿಬ್ಬರಿಗೆ ಸೋಂಕು ತಗುಲಿದೆ.

ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಆಗಸ್ಟ್ 9ರಂದು ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸಚಿವರು ಟ್ವೀಟ್ ಮಾಹಿತಿ ನೀಡಿದ್ದರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳು ಶ್ರಮಿಸುತ್ತಿವೆ.

ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದಿದ್ದರು.


Spread the love

About Laxminews 24x7

Check Also

ಎಲೆ ಮರೆಯಲ್ಲಿ ಬೆತ್ತಲಾದ ನಟಿ

Spread the loveಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾ ಮೂಲಕ ಕಿಯಾರಾ ಅಡ್ವಾಣಿ ಅಭಿಮಾನಿಗಳ ಮನಗೆದ್ದಿದ್ದಾರೆ. ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ