Breaking News

ಇಂದು ಸಿಎಂ ನೇತೃತ್ವದ ಮಹತ್ವ ಸಭೆ: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ?

Spread the love

ರಾಜ್ಯದ ಎಲ್ಲ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶ ಹಬ್ಬ ಆಚರಿಸಲು ಉತ್ಸುಕವಾಗಿವೆ. ಆದ್ರೆ ಇನ್ನೂ ಕೂಡ ಸರ್ಕಾರದಿಂದ ಅನುಮತಿ ದೊರೆತಿಲ್ಲ. ಹಬ್ಬಕ್ಕೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದ್ದು, ಬಳಿಕ ಸಿಎಂ ಬೊಮ್ಮಾಯಿ ಘೋಷಣೆ ಮಾಡುವ ಸಾಧ್ಯತೆ ಇದೆ.

 

ಕಳೆದ ಬಾರಿಯ ಸಭೆಯಲ್ಲೇ ಆದೇಶ ಹೊರಡುತ್ತೆ ಎನ್ನಲಾಗಿತ್ತು. ಆದರೆ ಸಿಎಂ ಮಾತ್ರ ಡಿಸಿಗಳಿಂದ ಮಾಹಿತಿ ಪಡೆದು ಸರಿಯಾದ ಸಮಯಕ್ಕೆ ಸರಿಯಾದ ನಿರ್ಣ ತೆಗೆದುಕೊಳ್ಳುತ್ತೇವೆ ಎಂದಷ್ಟೇ ಹೇಳಿದ್ದರು. ಸಚಿವರು, ಹಿಂದೂಪರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿವೆ. ಸಚಿವರ ಪ್ರಸ್ತಾಪಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದಾರೆ ಅಂತ ತಿಳಿದು ಬಂದಿದೆ.

 


Spread the love

About Laxminews 24x7

Check Also

ನೈಋತ್ಯ ರೈಲ್ವೆಗೆ ಸೆಪ್ಟೆಂಬರ್​ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ

Spread the love ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ