Breaking News
Home / Uncategorized / 5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ

5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ

Spread the love

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿರುವ ರಾಜ್ಯ ಸರ್ಕಾರ ಸರಳವಾಗಿ ಗಣೇಶ ಹಬ್ಬ ಆಚರಿಸುವಂತೆ ಸೂಚನೆ ನೀಡಿದೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಈಬಾರಿ 5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಷತ್ತುಗಳನ್ನು ವಿಧಿಸಲಾಗಿದೆ ಎಂದರು.

 

ಹೊಸ ಗೈಡ್ ಲೈನ್:
* ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯ
* ಗಣೇಶೋತ್ಸವ ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು
* ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ
* ಸರ್ಕಾರಿ ಹಾಗೂ ಖಾಲಿ ಜಾಗಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಹುದು
* ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ವ್ಯಾಕ್ಸಿನೇಷನ್ ಅಭಿಯಾನ
* ನಗರ ಪ್ರದೇಶಗಳಲ್ಲಿ ವಾರ್ಡ್ ಗೆ 1ರಂತೆ ಮೂರ್ತಿ ಪ್ರತಿಷ್ಠಾಪಿಸಬಹುದು
* ಗ್ರಾಮೀಣ ಅಥವಾ ಹಳ್ಳಿಗಳಲ್ಲಿ ಸ್ಥಳೀಯಾಡಳಿತದಿಂದ ಷರತ್ತುಗಳ ನಿರ್ಧಾರ
* 50X50 ವಿಸ್ತೀರ್ಣದ ಪೆಂಡಾಲ್ ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
* ಯಾವುದೇ ಮನರಂಜನಾ ಕಾರ್ಯಕ್ರಮ, ಡಿಜೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
* ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆ, ವಾದ್ಯಗಳಿಗೆ ನಿರ್ಬಂಧ
* ನಿಗದಿತ ಸದಸ್ಯರಿಂದ ಮಾತ್ರ ನಿಗದಿತ ಸ್ಥಳಗಳಲ್ಲಿ ವಿಸರ್ಜನೆ
* ಹಳ್ಳಿಗಳಲ್ಲಿ ಕೆರೆಗಳಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ
* ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಗಡಿ ಜಿಲ್ಲೆಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ
* ಶಾಲಾ-ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ


Spread the love

About Laxminews 24x7

Check Also

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

Spread the loveಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ