ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿರೋ ರಾಜ್ಯದ 3 ಮಹಾನಗರ ಪಾಲಿಕೆಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಚುನಾವಣಾ ಮತ ಎಣಿಕೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಪಾಲಿಕೆಯ ಗದ್ದುಗೆ ಏರೋದ್ಯಾರು ಅನ್ನೋ ಕುತೂಹಲ ಹೆಚ್ಚಾಗಿದೆ.
ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತಎಣಿಕೆಗೆ ಕ್ಷಣಗಣನೆ
ಬೆಳಗ್ಗೆ 8 ಗಂಟೆಯಿಂದ ಮೂರು ಮಹಾನಗರ ಪಾಲಿಕೆಗಳ ಮತ ಎಣಿಕೆ ಆರಂಭ
ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮೂರೂ ಮಹಾನಗರ ಪಾಲಿಕೆಗಳ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದೆ. ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿತ್ತು. ಹುಬ್ಬಳ್ಳಿ – ಧಾರವಾಡ 82 ವಾರ್ಡ್, ಬೆಳಗಾವಿಯ 58 ವಾರ್ಡ್, ಕಲಬುರಗಿಯ 52 ವಾರ್ಡ್ ಸೇರಿ ಮೂರೂ ಪಾಲಿಕೆಗಳ ಒಟ್ಟು 195 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ 1,105 ಅಭ್ಯರ್ಥಿಗಳು ಅದೃಷ್ಟಪರೀಕ್ಷೆಗೆ ಇಳಿದಿದ್ದರು. ಸದ್ಯ ಬೆಳಗ್ಗೆ 8 ಗಂಟೆಗೆ ಮೂರು ಪಾಲಿಕೆಗಳ ಮತ ಎಣಿಕೆ ಆರಂಭವಾಗಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತಗಳು ಅಗತ್ಯ ತಯಾರಿ ಮಾಡಿಕೊಂಡಿವೆ. ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಕೌಂಟಿಂಗ್ ನಡೆಯಲಿದೆ. ಕೊರೊನಾ ಹಿನ್ನೆಲೆ ವಿಜಯೋತ್ಸವ ಹಾಗೂ ಮತ ಎಣಿಕೆ ಕೇಂದ್ರದ ಬಳಿ ಹೆಚ್ಚು ಜನ ಜಮಾವಣೆಗೆ ನಿರ್ಭಂಧ ವಿಧಿಸಲಾಗಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ 1,105 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗುವ ಮೂಲಕ ಪಾಲಿಗೆ ಗದ್ದುಗೆ ಯಾರ ಪಾಲಾಗುತ್ತೆ ಅನ್ನೋದು ಗೊತ್ತಾಗಲಿದೆ.
Laxmi News 24×7