Breaking News

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್‍ಗೂ ಕೊರೊನಾ..!

Spread the love

ನವದೆಹಲಿ, ಆ.13- ಕೇಂದ್ರ ಆಯುಷ್ (ಆಯುರ್ವೇದ, ಯೋಗ, ಯುನಾನಿ ಮತ್ತು ಸಿದ್ಧ) ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೇಂದ್ರ ಸಚಿವರು ಈಗ ಐಸೋಲೇಷನ್‍ನಲ್ಲಿ ಇದ್ದು, ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಐದನೇ ಸಚಿವರಿಗೆ ಕೋವಿಡ್-19 ತಗುಲಿದಂತಾಗಿದೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವರು ನನಗೆ ಕೊರೊನಾ ಸೋಂಕು ದೃಢಪಟಿದೆ. ನಾನು ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ಧಾರೆ.

ಶ್ರೀಪಾದ್ ಯಸ್ಸೋ ನಾಯಕ್ ಅವರಿಗೂ ಮುನ್ನ ಕೇಂದ್ರ ಸಚಿವರಾದ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಅರ್ಜುನ್ ಮೇಘ್ವಾಲ್ ಮತ್ತು ಕೈಲಾಶ್ ಚೌಧರಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ