Breaking News

ಬೆಳಗಾವಿಯಲ್ಲಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​

Spread the love

ಬೆಳಗಾವಿ: ಕಳೆದ 36 ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆ ಆಳಿದ MESಗೆ ಭಾರೀ ಮುಖಭಂಗ ಎದುರಾಗುವ ಸಾಧ್ಯತೆಗಳಿದ್ದು, ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವುದು ಬಹುತೇಕ ಫಿಕ್ಸ್​ ಆಗ್ತಿದೆ.

 

 

ಜಿಲ್ಲೆಯಲ್ಲಿ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಬಿ.ಕೆ ಮಾಡೆಲ್ ಸ್ಕೂಲ್​​​ನಲ್ಲಿ ಭರದಿಂದ ಸಾಗಿದೆ. ಈ ವೇಳೆ ತಮ್ಮ ಪಕ್ಷ ಮುನ್ನಡೆ ಪಡೆಯುತ್ತಿದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಣೆಗೆ ಮುಂದಾಗಿದ್ದು, ಈ ವೇಳೆ ಪೊಲೀಸರು ಜನರನ್ನು ಚದುರಿಸಲು ಲಾಠಿಚಾರ್ಜ್​ ಮಾಡಿದ್ದಾರೆ.

ಕೊರೊನಾ ನಿಯಮ ಉಲ್ಲಂಘಿಸಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮತ ಏಣಿಕೆ ಕೇಂದ್ರದ ಮುಂದೆ ಜಮಾಯಿಸಿದ್ದು, ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ವಿಜಯೋತ್ಸವ ಆಚರಣೆಗೆ ಮುಂದಾಗಿದ್ದಾರೆ. ಈ ವೇಳೆ ಪರಿಸ್ಥಿತಿ ಹತೋಟಿಗೆ ಸಿಗದೇ ಪೊಲೀಸರು ಲಾಠಿಚಾರ್ಜ್​ ಆರಂಭಿಸಿದ್ದಾರೆ. ಮತ ಎಣಿಕೆಗೂ ಮುನ್ನವೇ ಕೊರೊನಾ ಕಾರಣದಿಂದ ಫಲಿತಾಂಶದ ಬಳಿಕ ವಿಜಯೋತ್ಸವ ಆಚರಣೆ ಮಾಡುವುದು, ಗೆದ್ದ ಅಭ್ಯರ್ಥಿಗಳನ್ನು ಮೆರವಣಿಗೆ ಮಾಡುವುದು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನ ಸೇರಿವುದನ್ನು ನಿಷೇಧ ಮಾಡಿ ಸೂಚನೆ ನೀಡಲಾಗಿತ್ತು. ಈ ನಡುವೆಯೂ ಭಾರೀ ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಕಾರ್ಯಕರ್ತರು ಬಣ್ಣ ಎರಚಿಕೊಂಡು ಸಂಭ್ರಮಾಚರಣೆ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದಿತ್ತು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ