Breaking News

ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ

Spread the love

 ಬೆಳಗಾವಿ :ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಕುರಿತು ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ ನೀಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆ ತಿಳಿಸಿದೆ.
ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ ಗೆಜೆಟ್

ಸ್ವಲ್ಪ ಹೊತ್ತಿನ ಮೊದಲು ಜಿಲ್ಲಾಧಿಕಾರಿಗಳ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಬೆಳಗಾವಿ ಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಎಂದು ತಿಳಿಸಲಾಗಿತ್ತು.

ಆದರೆ ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ ಗೆಜೆಟ್ ಪ್ರಕಾರ ಮೇಯರ್ ಹುದ್ದೆ ಸಾಮಾನ್ಯ ಹಾಗೂ ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಗೊಂದಲದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಯನ್ನು ಜಿಲ್ಲಾಧಿಕಾರಿಗಳು ತಡೆಹಿಡಿದಿದ್ದಾರೆ. ಮಂಗಳವಾರ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ