Breaking News

ಕಾಂಗ್ರೆಸ್‌ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ : ಸಿದ್ದರಾಮಯ್ಯ ಪ್ರತಿಕ್ರಿಯೆ

Spread the love

ಬೆಂಗಳೂರು: ಮೂರು ಮಹಾನಗರ ಪಾಲಿಕೆ ಚುನಾವಣೆ ಫ‌ಲಿತಾಂಶ ಕಾಂಗ್ರೆಸ್‌ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್‌ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಮಾತ್ರ ನಾವು ಗೆದ್ದಿದ್ದೇವೆ. ಹುಬ್ಬಳ್ಳಿಯಲ್ಲಿ ನಾವು ಬಹುಮತ ಗಳಿಸುವ ನಿರೀಕ್ಷೆಯಿತ್ತು, ಆದರೂ 33 ಸ್ಥಾನ ಗೆದ್ದಿದ್ದೇವೆ. ಅಲ್ಲಿ ಯಾವೊಂದು ಪಕ್ಷಕ್ಕೂ ಬಹುಮತ ಬಂದಿಲ್ಲ. ಕಲಬುರಗಿಯಲ್ಲಿ ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ 26 ಸ್ಥಾನ ಗಳಿಸಿದ್ದು ಇಲ್ಲೂ ಸಹ ಯಾವ ಪಕ್ಷವೂ ಬಹುಮತ ಪಡೆದಿಲ್ಲ ಎಂದು ಹೇಳಿದರು.

ತರೀಕೆರೆ ಪಾಲಿಕೆ ಚುನಾವಣೆಯ 23 ಸ್ಥಾನಗಳ ಪೈಕಿ ಕಾಂಗ್ರೆಸ್‌ ಪಕ್ಷ 15 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ ಏಕೈಕ ಸ್ಥಾನ ಗೆದ್ದಿದೆ. ಮೈಸೂರಿನ ಒಂದು ಪಾಲಿಕೆ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ತಿಳಿಸಿದರು


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ