Breaking News

ಅಧಿವೇಶನದ ಬಳಿಕ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುವ ಸಮಸ್ಯೆಗಳ ಕುರಿತು ಕ್ರಮ : ಶಶಿಕಲಾ ಜೊಲ್ಲೆ

Spread the love

ಬೆಂಗಳೂರು : ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು ಸೋಮವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿದರು.

ಈ ಸಭೆಯಲ್ಲಿ ಮುಜರಾಯಿ ಇಲಾಖೆಯಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಇಲಾಖೆಯಲ್ಲಿ ನಾವು ಮಾಡಬೇಕಾದಂತಹ ಕೆಲಸ ಬಹಳ ಇದೆ. ಇಡೀ ಜಗತ್ತಿನಲ್ಲಿಯೇ ನಮ್ಮ ಸಂಸ್ಕೃತಿ, ಆದ್ಯಾಾತ್ಮಿಕತೆಗೆ ಹೆಸರುವಾಸಿಯಾಗಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ನಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮುಜರಾಯಿ ಇಲಾಖೆಯಲ್ಲಿ ಸಿಬ್ಬಂಧಿ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯ ಕಾರ್ಯದರ್ಶಿಯ ಜೊತೆಗೆ ಚರ್ಚೆ ನಡೆಸಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಭರ್ತಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ