Home / ಜಿಲ್ಲೆ / ಬೆಂಗಳೂರು / ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

Spread the love

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ.

ಆರ್​ಟಿ‌ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು.

ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟವೇ ಕಲಬುರಗಿ ಪಾಲಿಕೆ ಆಡಳಿದ ಚುಕ್ಕಾಣಿ ಹಿಡಿಯಲಿದೆ ಎಂದು ಬೊಮ್ಮಾಯಿ‌ ಸುಳಿವು ನೀಡಿದರು.

ನಡ್ಡಾ ಭೇಟಿ ಸಾಧ್ಯತೆ: ದೆಹಲಿ ಪ್ರವಾಸದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಗಳ ಮದುವೆಯ ಆರತಕ್ಷತೆಗೆ ಹಾಜರಾಗಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಸಚಿವ ಸಂಪುಟದ ನಾಲ್ಕು ಸ್ಥಾನಗಳ ಭರ್ತಿ, ನಿಗಮ-ಮಂಡಳಿ ಅಧ್ಯಕ್ಷರ ಬದಲಾವಣೆ ವಿಷಯ ಈ ಬಾರಿ ಚರ್ಚಿಸುವುದಿಲ್ಲ ಎಂದು ಬೊಮ್ಮಾಯಿ‌ ಸ್ಪಷ್ಟಪಡಿಸಿದರು


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ