Breaking News

ಗುಂಡೇಟಿಗೆ ಎಮ್ಮೆ ಬಲಿ

Spread the love

ಬೆಳ್ತಂಗಡಿ :ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ.

ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು ಕಂಡುಬಂದಿದ್ದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಜತೆ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ