ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ.
ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ.
ಶೂಟಿಂಗ್ ನಡುವೆ ತ್ರಿಶಾ ಕೃಷ್ಣನ್ ದಾರ್ಮಿಕ ಸ್ಥಳದಲ್ಲಿ ಎಡವಟ್ಟೊಂದನ್ನು ಮಾಡಿದ್ದಾರೆ. ಚಿತ್ರೀಕರಣ ವೇಳೆ ಚಪ್ಪಲಿ ಹಾಕಿಕೊಂಡು ತ್ರಿಶಾ ದೇವಸ್ಥಾನದ ಒಳಗೆ ಓಡಾಡಿದ್ದಾರೆ. ಅಷ್ಟು ಮಾತ್ರವಲ್ಲದೆ ಶಿವಲಿಂಗ ಮತ್ತು ನಂದಿ ದೇವರಿರುವ ಈ ಧಾರ್ಮಿಕ ಸ್ಥಳದಲ್ಲಿ ತ್ರಿಶಾ ಚಪ್ಪಲಿ ಹಾಕಿರುವ ದೃಶ್ಯ ವೈರಲ್ ಆಗಿದೆ.
ಅನೇಕರು ಇದನ್ನು ಕಂಡು ಕೆಂಡಾಮಂಡಲರಾಗಿದ್ದಾರೆ. ಅದರಲ್ಲೂ ತಮಿಳುನಾಡಿನ ಹಿಂದೂ ಸಂಘಟನೆಗಳು ತ್ರಿಶಾ ಮತ್ತು ಮಣಿರತ್ನಂ ಅವರನ್ನು ಬಂಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.
Laxmi News 24×7