Breaking News
Home / ರಾಜಕೀಯ / ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳ ನಿರ್ಬಂಧ ಸಡಿಲಿಕೆ ..!

ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳ ನಿರ್ಬಂಧ ಸಡಿಲಿಕೆ ..!

Spread the love

ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು ದ.ಕ.ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿದಂತೆ ಪ್ರಮುಖ ದೇವಸ್ಥಾನಗಳು ವಾರಾಂತ್ಯಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭ ಭಕ್ತಾದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ದೇವರ ದರ್ಶನ ಪಡೆಯಬಹುದು. ಅಲ್ಲದೆ ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಮುಂದಿನ ಆದೇಶದವರೆಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ.

ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಸಮಯದಲ್ಲಿ ವಸತಿ ಗೃಹಗಳಲ್ಲಿ ತಂಗಲು ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅಲ್ಲದೆ ವಾರಾಂತ್ಯ ದಿನಗಳಲ್ಲಿ ಎಲ್ಲಾ ರೀತಿಯ ಉತ್ಸವ / ಸೇವೆಗಳು ತೀರ್ಥ, ಪ್ರಸಾದ ಮುಡಿ ಸೇವೆ, ವಸತಿಗಳನ್ನು
ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ – 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ