Breaking News

ದಲಿತ-ಬ್ರಾಹ್ಮಣರ ಒಗ್ಗಟ್ಟಿನಿಂದ ನಮ್ಮ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರುವಂತೆ ಮಾಡಬೇಕು:. ಮಾಯಾವತಿ

Spread the love

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ, ಸಮಾಜವಾದಿ ಪಕ್ಷ ದಂತೆ ಬರೀ ಮಾತನಾಡದೆ, ಕೆಲಸವನ್ನೂ ಮಾಡುವುದಾಗಿ ಬಹುಜನ್‌ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಹೇಳಿಕೊಂಡಿದ್ದಾರೆ.

ಬ್ರಾಹ್ಮಣ ಸಮುದಾಯದ ಮತಗಳನ್ನು ಸೆಳೆಯುವುದಕ್ಕಾಗಿ ಪಕ್ಷವು ಒಂದು ತಿಂಗಳ ಕಾಲ ನಡೆಸಿದ ಅಭಿಯಾನದ ಕೊನೆಯ ದಿನದಂದು ಪ್ರಬುದ್ಧ್ ವರ್ಗ ಸಮ್ಮೇಳನಲ್ಲಿ ಅವರು ಈ ಮಾತನ್ನಾಡಿದ್ದಾರೆ.

ದಲಿತ-ಬ್ರಾಹ್ಮಣರ ಒಗ್ಗಟ್ಟಿನಿಂದ ನಮ್ಮ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರುವಂತೆ ಮಾಡಬೇಕು. ಬಿಜೆಪಿ ಮತ್ತು ಸಮಾಜವಾದಿ ಪಕ್ಷ ಬರೀ ಮಾತನಾಡುತ್ತವೆ. ಆದರೆ ಆ ಪಕ್ಷಗಳು ಈವರೆಗೆ ಬ್ರಾಹ್ಮಣರ ಹಿತಾಸಕ್ತಿಯನ್ನು ಕಾಪಾಡಲು ಯಾವುದೇ ಕೆಲಸ ಮಾಡಿಲ್ಲ. ನಾವು ಹೇಳಿದಂತೆ ಕೆಲಸ ಮಾಡಿ ತೋರಿಸುತ್ತೇವೆ. ದಲಿತರು ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ನಮ್ಮ ಸರ್ಕಾರ ತನಿಖೆ ಕೈಗೊಳ್ಳಲಿದೆ. ಹಾಗೆಯೇ ಬ್ರಾಹ್ಮಣರಿಗೆ ಹೆಚ್ಚಿನ ಕ್ಷೇತ್ರಗಳಲ್ಲಿ ಸ್ಥಾನ ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್ನೊಂದೆಡೆ, ಉ.ಪ್ರದೇಶದಲ್ಲಿ ನಿಶಾದ್‌ ಪಕ್ಷವು ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದೆ. 2022ರ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸೇರಿ ಕೊಂಡು 70 ಕ್ಷೇತ್ರಗಳಿಂದ ಕಣಕ್ಕಿ ಳಿಯುವುದಾಗಿ ಪಕ್ಷದ ಮುಖ್ಯಸ್ಥ ಸಂಜಯ್‌ ನಿಶಾದ್‌ ಹೇಳಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ