ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನದಿ ತೀರದಲ್ಲಿರುವ ಜನರಲ್ಲಿ ಆತಂಕ ಹೆಚ್ಚಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಬಳಿ ಹಿರಣ್ಯಕೇಶಿ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ.

ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೊಸಳೆಯನ್ನು ಸೆರೆ ಹಿಡಿದು ನಮ್ಮ ಆತಂಕ ದೂರ ಮಾಡಬೇಕೆಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ. ಇದನ್ನೂ

Laxmi News 24×7