Breaking News

ಎಣ್ಣೆಪ್ರಿಯರಿಗೆ ಹೊಡೆತ ಕೊಟ್ಟ ನಿಫಾ ವೈರಸ್​; ಮಂಗಳೂರಲ್ಲಿ 31 ಮದ್ಯದಂಗಡಿ ಬಂದ್

Spread the love

ಬೆಂಗಳೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಕಾಟ ಒಂದೆಡೆಯಾದ್ರೆ, ನಿಫಾ ವೈರಸ್​ನ ಭೀತಿ ಮತ್ತೊಂದೆಡೆಯಾಗಿದೆ.

ಈ ಸಂಬಂಧ ಕೇರಳದಿಂದ ಕರ್ನಾಟಕಕ್ಕೂ ನಿಫಾ ವೈರಸ್​ನ ಕಂಟಕ ಎದುರಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಇಲಾಖೆಯು ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನಿಫಾ ಅಲರ್ಟ್​ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಚಿಕಿತ್ಸೆಗಾಗಿ ಜಿಲ್ಲೆಯ ಆಸ್ಪತ್ರೆಗೆ ಬರುವ ರೋಗಿಗಗಳ ಮೇಲೆ ನಿಗಾವಹಿಸಬೇಕು. ಕೇರಳದಿಂದ ಜಿಲ್ಲೆಗೆ ಆಗಮಿಸುವವ ಮೇಲೂ ನಿಗಾವಹಿಸಬೇಕು. ಜೊತೆಗೆ ನಿಫಾ ವೈರಸ್ ಲಕ್ಷಣಗಳಿರೋ ಬಗ್ಗೆ ಸ್ಕ್ರೀನಿಂಗ್ ಮಾಡಲು ಜಿಲ್ಲೆಯ ಎಲ್ಲಾ 8 ಮೆಡಿಕಲ್ ಕಾಲೇಜುಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಜೊತೆಗೆ ಜಿಲ್ಲೆಯ 19 ಗ್ರಾಮಗಳ 31 ಮದ್ಯದಂಗಡಿಗಳನ್ನು ಮುಚ್ಚಲೂ ಕೂಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ