Breaking News
Home / ನವದೆಹಲಿ / ದೇಶದಲ್ಲಿ ಕೊರೊನಾ ಸ್ಫೋಟ- ಒಂದೇ ದಿನ 66,999 ಮಂದಿಗೆ ತಗುಲಿದ ಮಹಾಮಾರಿ

ದೇಶದಲ್ಲಿ ಕೊರೊನಾ ಸ್ಫೋಟ- ಒಂದೇ ದಿನ 66,999 ಮಂದಿಗೆ ತಗುಲಿದ ಮಹಾಮಾರಿ

Spread the love

ನವದೆಹಲಿ: ದೇಶದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ಒಂದೇ ದಿನ 66,999 ಮಂದಿಗೆ ಸೋಂಕು ತಗುಲಿದ್ದು, 942 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದ್ದು, ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಸಾವುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 8,30,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗಸ್ಟ್ 12, 2020ರವೆರೆಗೆ 2,68,45,688 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಮೊದಲ ನಾಲ್ಕು ಸ್ಥಾನಗಳಲ್ಲಿ ಕ್ರಮವಾಗಿ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಿವೆ. ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 12,712, ತಮಿಳುನಾಡು-5,871, ಆಂಧ್ರ ಪ್ರದೇಶ-9,597 ಮತ್ತು ಕರ್ನಾಟಕದಲ್ಲಿ 7,883 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ