ಬೆಂಗಳೂರು: ಕಲಬುರಗಿ ಪಾಲಿಕೆ ಅಧಿಕಾರದ ವಿಚಾರವಾಗು ಪ್ರಾರಂಭಿಕ ಹಂತದಲ್ಲಿ ಮಾತ್ರ ಚರ್ಚೆಯಾಗ್ತಿದೆ. ಆದರೆ ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ಎಲ್ಲ ಸಚಿವರ ಭೇಟಿ ಯಶಸ್ವಿಯಾಗಿದೆ. ರಿಂಗ್ ರೋಡ್ ದಾಬಸ್ ಪೇಟೆಯಿಂದ ಮೈಸೂರು ರೋಡ್ ಯೋಜನೆ ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದಿತ್ತು, ಅದನ್ನು ಕ್ಲಿಯರ್ ಮಾಡಿಸಿ ಮುಂದುವರೆಯಲಿದೆ. 5 -6 ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ. ರಾಜ್ಯದ ನಾಲ್ಕೈದು ಹೈವೆಗಳಿಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದರು.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಗ್ರಾಮೀಣ ಕನೆಕ್ಟಿಟಿವಿಟಿಗೆ ವಿಶೇಷ ಯೋಜನೆ ಮಾಡುವ ಬಗ್ಗೆ ಚರ್ಚೆಯಾಗಿದೆ. ಡಿಜಿಟಲೈಜೇಷನ್ ಅಫ್ ರೂರಲ್ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜೊತೆಗೂಡಿ ಮುಂದುವರೆಯಲಿದೆ ಎಂದರು.
Laxmi News 24×7