Breaking News
Home / ಜಿಲ್ಲೆ / ಹಾಸನ / ಬಿಜೆಪಿ ಜತೆ ಹೊಂದಾಣಿಕೆ ಬೇಡ: ಎಚ್‌ಡಿ ರೇವಣ್ಣ

ಬಿಜೆಪಿ ಜತೆ ಹೊಂದಾಣಿಕೆ ಬೇಡ: ಎಚ್‌ಡಿ ರೇವಣ್ಣ

Spread the love

ಹಾಸನ: ‘ಜೆಡಿಎಸ್‌ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದರು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್‌ ಬೆಂಬಲನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಅರುಣ್ ಸಿಂಗ್ ಹೇಳಿದ್ದನ್ನು ಸಿ.ಎಂ ಪಾಲಿಸಲಿ. ಹಡಗು ಮುಳುಗಿದರೆ ನಮ್ಮ ಬಳಿ ಸಬ್‌ ಮೆರಿನ್ ಇದೆ. ಪಕ್ಷ ಉಳಿಸಿಕೊಳ್ಳುವುದು ಗೊತ್ತು’ ಎಂದರು.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡನೆಗಾಗಿ ನಿವೃತ್ತ ಹೆಚ್ಚುವರಿ
ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರತ್ಯೇಕ ಕ್ಷೇತ್ರ ಪುನರ್ವಿಂಗಡಣಾ ಆಯೋಗ ರಚಿಸಿರುವುದು ಸರಿಯಲ್ಲ.
ಕೂಡಲೇ ರಾಜ್ಯ ಚುನಾವಣಾ ಆಯೋಗ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗೆ ಚುನಾವಣೆ ಘೋಷಣೆ
ಮಾಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ