Breaking News

ಸಂಪುಟಕ್ಕೆ ಪುತ್ರ: ಬಿಎಸ್‌ವೈ ಲಾಬಿ?

Spread the love

ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕಾರಣದಿಂದಾಗಿ ಸಿಎಂ ಹೊಸದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚಿಸಿದ್ದಾರೆ. ಅದಕ್ಕಾಗಿ ಬೊಮ್ಮಾಯಿ 2 ಬಾರಿ ರಾಷ್ಟ್ರ ರಾಜಧಾನಿಗೆ ಪ್ರವಾಸ ಕೈಗೊಂಡಿದ್ದಾರೆ.

ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಸಚಿವಾಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ. ವಿಶೇಷವಾಗಿ ಯಡಿಯೂರಪ್ಪ ಪುತ್ರನ ಪರ ಲಾಬಿ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ನಾಯಕರು ಸದ್ಯಕ್ಕೆ ಸಂಪುಟ ವಿಸ್ತರಣೆಗೆ ಅನುಮತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅದೇ ಕಾರಣಕ್ಕೆ ಕಳೆದ ಬಾರಿಯ ಸಿಎಂ ದಿಲ್ಲಿ ಭೇಟಿಯ ಸಂದರ್ಭದಲ್ಲಿಯೂ ನಡ್ಡಾ ಭೇಟಿಗೆ ಅವಕಾಶ ನೀಡಿರಲಿಲ್ಲ ಎನ್ನಲಾಗುತ್ತಿದೆ. ಗೃಹ ಸಚಿವ ಅಮಿತ್‌ ಶಾ ಜತೆಗೆ ವಿಜಯೇಂದ್ರ ಸೇರ್ಪಡೆ ಬಗ್ಗೆ ಬೊಮ್ಮಾಯಿ ಪ್ರಸ್ತಾವಿಸಿದಾಗ, ನಡ್ಡಾ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದ್ದರು ಎನ್ನಲಾಗಿದೆ.

ನಾಲ್ಕು ಸ್ಥಾನಕ್ಕೆ ಪೈಪೋಟಿ :

ಸೆ. 13ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ಸಚಿವ ಸ್ಥಾನ ಭರ್ತಿ ಮಾಡಬೇಕು ಎನ್ನುವುದು ಆಕಾಂಕ್ಷಿಗಳ ಒತ್ತಡ ಎನ್ನುವುದು ಮೂಲಗಳ ಹೇಳಿಕೆ.

ಬಿ.ವೈ. ವಿಜಯೇಂದ್ರ, ಬಸನಗೌಡ ಪಾಟೀಲ್‌ ಯತ್ನಾಳ್‌, ಸಿ.ಪಿ. ಯೋಗೇಶ್ವರ್‌, ರಾಜುಗೌಡ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆಯೇ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗಾಗಿ ಒಂದು ಸ್ಥಾನ ಖಾಲಿ ಇಟ್ಟುಕೊಳ್ಳುವ ಉದ್ದೇಶವನ್ನು ಸಿಎಂ ಹೊಂದಿದ್ದಾರೆ ಎನ್ನಲಾಗಿದೆ.

ಸಮಯ ಕೇಳಿದ ಬೊಮ್ಮಾಯಿ : ದಿಲ್ಲಿಗೆ ತೆರಳುವ ಮುನ್ನ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಸ್ವಲ್ಪ ಸಮಯ ವಕಾಶ ನೀಡುವಂತೆ ಮನವಿ ಮಾಡಿದ್ದ ಬೊಮ್ಮಾಯಿ ಅವರು ವಿಜಯೇಂದ್ರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆಗೆ ಚರ್ಚಿಸಿ ಶೀಘ್ರ ತೀರ್ಮಾನಿಸುವುದಾಗಿ ಹೇಳಿ ದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ