Breaking News

ಮಗುವಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Spread the love

ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ. ನ್ಯಾಯಾಧೀಶೆ ಶ್ಯಾಮಾಕಂರೋಸ್‌ ತೀರ್ಪು ನೀಡಿದ್ದಾರೆ.

2019ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಪ್ರಕರಣ ನಡೆದಿತ್ತು. ಆಟವಾಡುತ್ತಿದ್ದ ಮಗುವಿನ ಮೇಲೆ ಜಗದೀಶ್ ದೌರ್ಜನ್ಯ ನಡೆಸಿದ್ದ.

ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರ ಪಿಪಿ ಪುಷ್ಪಲತಾ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ