Breaking News

ಬನಹಟ್ಟಿ : ಚಿಮ್ಮಡ ಬಳಿ ರಸ್ತೆ ಅಪಘಾತ ಯುವಕ ಸಾವು

Spread the love

ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ರಬಕವಿ ರಸ್ತೆಯ ಚಿಮ್ಮಡ ಹದ್ದಿಯ ಮುಘಳಖೋಡ ಬಳಿ ನಡೆದ ರಸ್ತೆ ಅಪಘಾತದಲ್ಲಿ ಯುವನೋರ್ವ ಸಾವನ್ನಪಿದ ಘಟನೆ ಬನಹಟ್ಟಿ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲಿ ಬನಹಟ್ಟಿಯ ಸೋಮವಾರ ಪೇಟೆಯ ನಿವಾಸಿ ಬಾಳಯ್ಯ ಕಾಡಯ್ಯ ಕತ್ತಿ(27) ಮೃತ ದುರ್ದೈವಿ.

ಬಾಳಯ್ಯ ಅವರು ಗುರುವಾರ ರಾತ್ರಿ ತನ್ನ ಬೈಕನ್ನು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಸಿಪಿಐ ಜೆ. ಕರಣೇಶಗೌಡ ಹಾಗೂ ಪಿಎಸ್‌ಐ ಸುರೇಶ ಮಂಟೂರ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ