Breaking News

ಲಾರಿ, ಕಾರು ಡಿಕ್ಕಿ- ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

Spread the love

ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ನಡೆದಿದೆ.ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್(35) ಎಂದು ಗುರುತಿಸಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ನಾಲ್ಕು ಜನರ ಪ್ರಾಣ ರಕ್ಷಣೆ ಮಾಡಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಾರಿನಲ್ಲಿದ್ದವರು ತಮಿಳುನಾಡಿನ ಮೂಲದವರಾಗಿದ್ದು, ಸೇಲಂನಿಂದ ಮುಂಬೈಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ