Breaking News
Home / ಜಿಲ್ಲೆ / ಬೆಳಗಾವಿ / ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ: ಗೋವಿಂದ ಕಾರಜೋಳ

ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ: ಗೋವಿಂದ ಕಾರಜೋಳ

Spread the love

ಬೆಳಗಾವಿಯಲ್ಲಿ ಗಣೇಶೋತ್ಸವ 11 ದಿನ ಮಾಡಬೇಕೆಂದು ಯುವಕರು, ಹಿಂದು ಸಂಘಟನೆಗಳ ಒತ್ತಾಯವಿತ್ತು. ಹೀಗಾಗಿ 11 ದಿನಗಳ ಗಣೇಶೋತ್ಸವಕ್ಕೆ ಸೋಮವಾರ ಆದೇಶ ಬರಲಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಹತ್ವದ ಮಾಹಿತಿ ನೀಡಿದ್ದಾರೆ.

ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಐತಿಹಾಸಿಕ ನಗರ ಅನ್ನೋದು ಸಾಬೀತು ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಇನ್ನು ಏನೇನು ಅಭಿವೃದ್ಧಿ ಕೆಲಸಗಳು ಆಗಬೇಕು, ಅದೆಲ್ಲವನ್ನು ನಾನು ಹಾಗೂ ದಕ್ಷಿಣ ಶಾಸಕರು ಸೇರಿದಂತೆ ಸಂಸದರು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಅದೇ ರೀತಿ ಬೆಳಗಾವಿಯ ಬೈಪಾಸ್ ರಸ್ತೆಗೆ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದೇವೆ, ಕಾಮಗಾರಿ ಪ್ರಕ್ರಿಯೆ ಶುರುವಾಗಿದ್ದು, ಆದಷ್ಟು ಬೇಗನೆ ಕೆಲಸ ಆರಂಭವಾಗಲಿದೆ.

ಬೆಳಗಾವಿ ಜಿಲ್ಲೆಯ ಕೆಲ ಶಾಸಕರು ಒಗ್ಗಟ್ಟಿನಿಂದ ಪ್ರಯತ್ನದ ಪ್ರತಿಫಲವಾಗಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಹುತೇಕ ಮೂರು ಮಹಾನಗರ ಪಾಲಿಕೆ ಬಿಜೆಪಿ ಅಧಿಕಾರ ವಹಿಸಲಿದೆ. ಅದೇ ರೀತಿ ಕಲಬುರ್ಗಿ ಪಾಲಿಕೆಯಲ್ಲಿಯೂ ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಇದೇ ವೇಳೆ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸದೆ ಶ್ರೀ ಮಂಗಲ ಅಂಗಡಿ, ಶಾಸಕರಾದ ಶ್ರೀ ಅಭಯ್ ಪಾಟೀಲ್, ನಗರ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಶಶಿಕಾಂತ ಪಾಟೀಲ್, ರಾಜ್ಯ ಬಿಜೆಪಿ ವಕ್ತಾರ ಶ್ರೀ ಎಂ.ಬಿ.ಜೀರಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ