Breaking News

ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೆ ಸ್ವಾತಂತ್ರ್ಯೋತ್ಸವ ಆಚರಣೆ

Spread the love

ಬೆಂಗಳೂರು, ಆ.13- ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಯಾವುದೇ ಪಥ ಸಂಚಲನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ ಎಂದು ಹೇಳಿದರು.ಈ ಬಾರಿ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಕಾರ್ಯವೂ ಇರುವುದಿಲ್ಲ. ಮುಖ್ಯಮಂತ್ರಿಗಳನ್ನು ಬೆಳಗ್ಗೆ 8.58ಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಅವರು ಧ್ವಜವಂದನೆ ಸಲ್ಲಿಸಿ ನೇರ ವೇದಿಕೆಗೆ ಆಗಮಿಸುತ್ತಾರೆ.

ಈ ಬಾರಿ ಮುಖ್ಯಮಂತ್ರಿಗಳ ಜತೆಯಲ್ಲಿ ಯಾವುದೇ ಗಣ್ಯರು ವೇದಿಕೆ ಹಂಚಿಕೊಳ್ಳುವುದಿಲ್ಲ. ಕೇವಲ 20 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ 75 ಮಂದಿ ಕೊರೊನಾ ವಾರಿಯರ್ಸ್‍ಗಳನ್ನು ವಿಶೇಷ ಅತಿಥಿಗಳಾಗಿ ಭಾಗವಹಿಸುವಂತೆ ಕೋರಲಾಗಿದೆ. ಅದೇ ರೀತಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಮನೆಗೆ ಹಿಂದಿರುಗಿರುವ 25 ಮಂದಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಸಾರ್ವಜನಿಕರಿಗೆ ಪ್ರವೇಶಾವಕಾಶ ಇರುವುದಿಲ್ಲ. ಕೇವಲ ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ ಮಾತ್ರ ಇರುತ್ತದೆ. ಒಟ್ಟಾರೆ 45 ನಿಮಿಷಗಳೊಳಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

ಬಿಗಿ ಭದ್ರತೆ: ಬೆಂಗಳೂರು ನಗರ ಕಮಿಷನರ್ ಕಮಲ್‍ಪಂಥ್ ಮಾತನಾಡಿ, ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಅತ್ಯಂತ ಬಿಗಿಭದ್ರತೆ ಮಾಡಲಾಗಿದೆ. ಬಿಎಸ್‍ಎಫ್, ಸಿಎಆರ್, ಕೆಎಸ್‍ಆರ್‍ಪಿ, ಸಿವಿಲ್ ಪೊಲೀಸ್, ಮಹಿಳಾ ಪೊಲೀಸ್ ಸೇರಿದಂತೆ 350 ಪೊಲೀಸ್ ಸಿಬ್ಬಂದಿಗಳಿರುವ ಒಟ್ಟು 20 ತಂಡ ಮುಖ್ಯಮಂತ್ರಿಗಳಿಗೆ ಗೌರವ ಧ್ವಜವಂದನೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಮಾರ್ಚ್‍ಫಾಸ್ಟ್ ಇರುವುದಿಲ್ಲ. ಪಶ್ಚಿಮ ವಿಭಾಗದ ಅಡಿಷನಲ್ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ ಭದ್ರತಾ ವ್ಯವಸ್ಥೆ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ಮೈದಾನದ ಒಳಗೆ 9 ಡಿಸಿಪಿ, 31 ಇನ್ಸ್‍ಪೆಕ್ಟರ್‍ಗಳನ್ನು ಒಳಗೊಂಡ 680 ಪೆÇಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮಾಣಿಕ್ ಷಾ ಪರೇಡ್ ಸುತ್ತಮುತ್ತ 47 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಮೈದಾನದ ಹೊರಗೆ ಭದ್ರತೆಗಾಗಿ 10 ಕೆಎಸ್‍ಆರ್‍ಪಿ, 1 ಗರುಡ ಫೋರ್ಸ್, 1 ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಮತ್ತು ಕ್ವಿಕ್ ರಿಯಾಕ್ಷನ್ ಫೆÇೀರ್ಸ್ ನಿಯೋಜಿಸಲಾಗುತ್ತದೆ ಎಂದು ಹೇಳಿದರು.

ಮೈದಾನದ ಆವರಣದಲ್ಲಿ ಒಟ್ಟು 500 ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಆರ್ಮಿಯವರು, ಜನಪ್ರತಿನಿಗಳು, ವಿಶೇಷ ಅತಿಥಿಗಳು, ಉನ್ನತಾಕಾರಿಗಳು ಮಾತ್ರ ಭಾಗವಹಿಸಲಿದ್ದಾರೆ. ಒಟ್ಟಾರೆ ಕಾರ್ಯಕ್ರಮವು ಡಿಡಿ ಚಂದನದಲ್ಲಿ ಲೈವ್ ಟೆಲಿಕಾಸ್ಟ್ ಆಗಲಿದೆ. ಮೈದಾನದ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗುತ್ತದೆ ಎಂದು ಕಮಲ್‍ಪಂಥ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಪಶ್ಚಿಮ ವಿಭಾಗದ ಅಡಿಷನಲ್ ಕಮಿಷನರ್ ಮುರುಗನ್, ಬೆಂಗಳೂರು ನಗರ ಜಿಲ್ಲಾಕಾರಿ ಶಿವಮೂರ್ತಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ