Breaking News

ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ; 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ

Spread the love

ಬೆಂಗಳೂರು: ದೇಶದಾದ್ಯಂತ ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ವೈದ್ಯಕೀಯ & ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ.

ಒಟ್ಟು 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಗೆ 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ.

ಒಟ್ಟು 180 ಪ್ರಶ್ನೆಗಳಿದ್ದು, ಪ್ರತೀ ಪ್ರಶ್ನೆಗೆ 4 ಅಂಕಗಳಂತೆ, ಒಟ್ಟು 720 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪ್ರತೀ ಪ್ರಶ್ನೆಯ ತಪ್ಪು ಉತ್ತರಕ್ಕೆ ಒಂದು ನೆಗೆಟಿವ್ ಅಂಕ ಕಡಿತ ಮಾಡಲಾಗುತ್ತದೆ. 3 ಗಂಟೆಗಳ ಕಾಲ ಪರೀಕ್ಷೆ ನಡೆಯಲಿದ್ದು ಒಟ್ಟು 13 ಭಾಷೆಗಳಲ್ಲಿ ನೀಟ್ ಪರೀಕ್ಷೆ ಇರಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ