Breaking News

ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್‌ ಪಾಟೀಲ್‌ ಹೇಳಿಕೆ ಸಾಕ್ಷಿ: ದಿನೇಶ್‌

Spread the love

ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್‌ ಪಾಟೀಲ್‌ ಬಿಜೆಪಿ ಸೇರಲು ಹಣದ ಆಫ‌ರ್‌ ನೀಡಿದ್ದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 17 ಶಾಸಕರನ್ನು ಬಿಜೆಪಿ ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರ ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಶಾಸಕರ ಖರೀದಿಗೆ ಬಳಕೆಯಾದ ಹಣದ ಮೂಲ ಯಾವುದು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಸರ್ಕಾರ ರಚನೆಗೆ 17 ಶಾಸಕರ ಖರೀದಿಗೆ ಸುರಿದ ಅಕ್ರಮ ಹಣ ಯಾರು ತಿಂದು ವಿಸರ್ಜನೆ ಮಾಡಿದ ಹಣ ಎಂದ ಹೇಳಬೇಕು, ಈ ಅಕ್ರಮ ಹಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಮುಂದುವರಿಯಲು ನೈತಿಕತೆ ಉಳಿದಿಲ್ಲ, ಸಂವಿಧಾನಬದ್ಧವಾಗಿ ಚುನಾಯಿತವಾದ ಸರ್ಕಾರವನ್ನು ಸಂವಿಧಾನ ಬಾಹಿರವಾಗಿ ಕೆಡವುವ ಹೀನ ಸಂಸ್ಕೃತಿ ಬಿಜೆಪಿಯವರದ್ದು ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ