Breaking News
Home / ರಾಜಕೀಯ / ಬಾಲಕಿಗೆ ಲೈಂಗಿಕ ಕಿರುಕುಳ: ಆರೋ‍ಪಿ ಸೆರೆಹಿಡಿದ ಸ್ಥಳೀಯರು

ಬಾಲಕಿಗೆ ಲೈಂಗಿಕ ಕಿರುಕುಳ: ಆರೋ‍ಪಿ ಸೆರೆಹಿಡಿದ ಸ್ಥಳೀಯರು

Spread the love

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ದಲ್ಲಿ ಬೆಂಗಳೂರು ಕಲಾಸಿಪಾಳ್ಯದ ಆರೀಫ್ ಪಾಷಾ(30) ಎಂಬಾತನನ್ನು ಇಲ್ಲಿನ ಕಲ್ಕಟ್ಟದಲ್ಲಿ ಭಾನುವಾರ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಫೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಬಂಧಿತನು ಕೂಲಿ ಕಾರ್ಮಿಕ ನಾಗಿದ್ದು, ತಿನಿಸು ನೀಡುವುದಾಗಿ ಹೇಳಿ ಪರಿಚಿತ ವ್ಯಕ್ತಿಯೊಬ್ಬರ ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದನು. ಆತನ ಕೃತ್ಯಕ್ಕೆ ಹೆದರಿ ಬಾಲಕಿ ಓಡಿ ಬಂದಿದ್ದು, ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ವಿಚಾರಿಸಿದ್ದಾರೆ. ನಡೆದ ಘಟನೆಯನ್ನು ಬಾಲಕಿ ತಿಳಿಸಿದ್ದಾಳೆ. ಬಳಿಕ ಅವರು ಸ್ಥಳೀಯರ ಸಹಕಾರದಲ್ಲಿ ಆರೋಪಿಯನ್ನು ಸೆರೆ ಹಿಡಿದು ಉಳ್ಳಾಲ ಪೊಲೀಸರಿಗೆ ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ