ಬೆಂಗಳೂರು: ವಿಧಾನಸೌಧದ ರೂಮ್ ನಂಬರ್ 208ರ ಪಕ್ಕದಲ್ಲಿ ಮಧ್ಯದ ಬಾಟಲಿಗಳು ಕಂಡು ಬಂದಿವೆ. ಹೀಗಾಗಿ ವಿಧಾನಸೌಧದಲ್ಲಿ ಎಣ್ಣೆ ಪಾರ್ಟಿ ನಡಿತಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ.
ಅಧಿವೇಶನದ ಹೊತ್ತಲ್ಲಿ, ಅಷ್ಟೊಂದು ಬಿಗಿ ಭದ್ರೆತಯ ನಡವೆಯೂ ಬಿಯರ್ ಬಾಟಲಿಗಳು ವಿಧಾನಸೌಧ ಪ್ರವೇಶಿಸಿದ್ದು ಹೇಗೆ ಎಂಬ ಕೂತೂಹಲ ಎಲ್ಲರಲ್ಲಿ ಮೂಡಿದೆ. ರಾತ್ರಿಯಾಗಿ ಬೆಳಗಾಗುವ ಹೊತ್ತಿಗೆ 208 ರೂಂ ಪಕ್ಕದ ವಾಟರ್ ಟ್ಯಾಂಕ್ ಬಳಿ 2 ಬಿಯರ್ ಬಾಟಲ್ ಗಳು ಪತ್ತೆಯಾಗಿದೆ. ಸದ್ಯ ವಿಧಾನಸೌಧದಲ್ಲಿ ಬಿಯರ್ ಬಾಟಲ್ ಗಳನ್ನು ಇಟ್ಟಿರೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಪೀಕರ್ ತನಿಖೆಗೆ ಆದೇಶ ನೀಡುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.
Laxmi News 24×7