ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ.
ಜತೆಗೆ ಕಾಂಗ್ರೆಸ್ ನಲ್ಲಿ ಯುವ ನಾಯಕರನ್ನು ತಂದು ಪಕ್ಷ ಸಂಘಟನೆಯ ಶಪತ ಮಾಡಿರುವ ಡಿ.ಕೆ.ಶಿವಕುಮಾರ್ ಯುವ ನಾಯಕರನ್ನು ಸೆಳೆಯುವ ಕೆಲಸ ನಡೆಸಿದ್ದಾರೆ
Laxmi News 24×7