Breaking News

ಮೈಸೂರಿಗೆ ಗಜ ಪಯಣ ಆರಂಭ

Spread the love

ಮೈಸೂರು, ಸೆ.13- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಈ ನಡುವೆ ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ. ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸರಳ ಗಜಪಯಣಕ್ಕೆ ಚಾಲನೆ ದೊರೆತಿದ್ದು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ. ದಸರಾ ಗಜಪಡೆಯಲ್ಲಿ 5 ಗಂಡಾನೆ, 3 ಹೆಣ್ಣಾನೆ ಭಾಗಿಯಾಗಲಿವೆ.

ಕೊರೊನಾ ನಡುವೆ ಸಾಂಪ್ರದಾಯಿಕ ದಸರಾ ಆಚರಣೆಗೆ ಇಂದು ಚಾಲನೆ ದೊರೆತಿದ್ದು, ಜಂಬೂಸವಾರಿ ಕ್ಯಾಪ್ಟನ್ 56 ವರ್ಷದ ಅಭಿಮನ್ಯು ನೇತೃತ್ವದ ಗಜಪಡೆ ಇಂದು ನಾಡಿನತ್ತ ಹೆಜ್ಜೆ ಹಾಗುತ್ತಿವೆ. ಇಂದು ಸಂಜೆ ಲಾರಿ ಮೂಲಕ ಮೈಸೂರಿನ ಅಶೋಕಪುರಂ ಅರಣ್ಯ ಭವನಕ್ಕೆ ಗಜಪಡೆ ಆಗಮಿಸಲಿದ್ದು, ಅಕ್ಟೋಬರ್ 16 ರಂದು ಅರಮನೆಗೆ ಗಜಪಡೆ ಎಂಟ್ರಿಯಾಗಲಿವೆ. ಈ ವೇಳೆ ಜಿಲ್ಲಾಡಳಿತ ವತಿಯಿಂದ ಗಜಪಡೆಗೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಸ್ವಾಗತಿಸಲಾಗುತ್ತದೆ.

ಇನ್ನು ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು 34 ವರ್ಷದ ಅಶ್ವತ್ಥಾಮ ಆಗಮಿಸುತ್ತಿದ್ದಾನೆ. 58 ವರ್ಷದ ವಿಕ್ರಮ, 43 ವರ್ಷದ ಧನಂಜಯ, 44 ವರ್ಷದ ಕಾವೇರಿ, 48 ವರ್ಷದ ಚೈತ್ರ, 20 ವರ್ಷದ ಲಕ್ಷ್ಮಿ ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿವೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ